ರಮ್ಯಾ ತಾಯಿ ಅಸಮಾಧಾನ

ಮಂಡ್ಯ: ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರ ತಾಯಿ ರಂಜಿತಾ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ವರಿಷ್ಠರು ತಮಗೆ ಜವಾಬ್ದಾರಿ ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.

‘28 ವರ್ಷಗಳಿಂದ ಕಾಂಗ್ರೆಸ್‌ಗಾಗಿ ದುಡಿಯುತ್ತಿದ್ದೇನೆ. ಪಕ್ಷದಲ್ಲಿ ಯಾವುದಾದರೂ ಒಂದು ಸಣ್ಣ ಸ್ಥಾನ ಕೊಡಿ ಎಂದು ಮನವಿ ಸಲ್ಲಿಸುತ್ತಾ ಬಂದಿದ್ದೇನೆ. ಹಲವು ವರ್ಷ ಕಳೆದರೂ ನನ್ನ ಬೇಡಿಕೆ ಈಡೇ
ರಲಿಲ್ಲ’ ಎಂದರು.

‘ರಂಜಿತಾ ಮಗಳ ಪರ ಪ್ರಚಾರ ನಡೆಸಿದ್ದನ್ನು ಬಿಟ್ಟರೆ ಮಂಡ್ಯದಲ್ಲಿ ಅವರು ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಂಡಿಲ್ಲ. ಪಕ್ಷದಲ್ಲಿ ಜವಾಬ್ದಾರಿ ಬಯಸಿದ್ದರು ಎಂಬುದೂ ನಮಗೆ ಗೊತ್ತಿಲ್ಲ. ಅವರ ಜತೆ ಮಾತನಾಡುತ್ತೇವೆ’ ಎಂದು ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್‌ ಹೇಳಿದ್ದಾರೆ.

Back to Top