ಚುನಾವಣಾ ಸುದ್ದಿ

Wed, 05/16/2018 - 13:00
ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುವ ಪ್ರಧಾನಿ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಲು ಬಿಜೆಪಿ ಯಾವ ಹಣ ಬಳಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆಗ್ರಹಿಸಿದರು.
Wed, 05/16/2018 - 12:59
ನಾಯಕನನ್ನಾಗಿ ಆಯ್ಕೆಮಾಡಿರುವ ಪ್ರತಿಯನ್ನು ರಾಜ್ಯಪಾಲರಿಗೆ ಸಲ್ಲಿಸಿ, ಆದಷ್ಟು ಬೇಗ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕೋರಿ ಮನವಿ ಮಾಡಿದ್ದೇವೆ. ರಾಜ್ಯಪಾಲರು ಅದಕ್ಕೆ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.
Wed, 05/16/2018 - 00:51
‘ಜೆಡಿಎಸ್‌ಗೆ ಬೇಷರತ್ ಬೆಂಬಲ ನೀಡಿದ್ದೇವೆ ಹಾಗೂ ಈ ಕುರಿತಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರಮುಖೇನ ತಿಳಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Wed, 05/16/2018 - 00:45
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಕಾಂಗ್ರೆಸ್ 122ರಿಂದ ಏಕಾಏಕಿ 78ಕ್ಕೆ ಇಳಿದು ಬಿಟ್ಟಿದೆ. 11 ಶಾಸಕರು ಪಕ್ಷ ತ್ಯಜಿಸಿದ್ದರೂ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಜೆಡಿಎಸ್ ಸಫಲವಾಗಿದೆ.
Wed, 05/16/2018 - 00:20
222 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಮೂಡಿ ಬಂದ ಬಿಜೆಪಿ ರಾಜ್ಯಪಾಲರನ್ನು ಭೇಟಿಯಾಗಿ ಅಧಿಕಾರ ರಚನೆಯ ಹಕ್ಕು ಮಂಡಿಸಿದೆ. ಮೈತ್ರಿಗೆ ಮುಂದಾಗಿರುವ ಜೆಡಿಎಸ್–ಕಾಂಗ್ರೆಸ್ ನಾಯಕರ ನಿಯೋಗ, ರಾಜಭವನಕ್ಕೆ ತೆರಳಿ ತಮ್ಮ ಹಕ್ಕನ್ನು ಪ್ರತಿಪಾದಿಸಿದೆ
Tue, 05/15/2018 - 23:52
ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ದೂಳೆಬ್ಬಿಸಿದ್ದಾರೆ.
Tue, 05/15/2018 - 23:47
ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ, ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವ ಮೂಲಕ ಕೋಟೆನಾಡಿನ ಮೊದಲ ಶಾಸಕಿ ಎಂಬ ದಾಖಲೆಗೆ ಪಾತ್ರವಾಗಿದ್ದಾರೆ.
Tue, 05/15/2018 - 23:44
ಲಿಂಗಸುಗೂರು ಮೀಸಲು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸಿದ್ಧಪ್ಪ ಬಂಡಿ ಸೋಲಿನ ಸುದ್ದಿ ಕೇಳುತ್ತಿದ್ದಂತೆಯೇ ಎಣಿಕೆ ಕೇಂದ್ರದಲ್ಲಿಯೇ ಕುಸಿದುಬಿದ್ದರು.
Tue, 05/15/2018 - 23:41
ಸಮಾಜವಾದಿ ಹಿನ್ನೆಲೆಯ ಕಾಗೋಡು ತಿಮ್ಮಪ್ಪ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅತ್ಯಂತ ಹಿರಿಯ (87) ಅಭ್ಯರ್ಥಿ. ಅವರು ಬಿಜೆಪಿಯ ಹರತಾಳು ಹಾಲಪ್ಪ ಅವರ ಎದುರು ಸೋಲು ಕಂಡಿದ್ದಾರೆ.
Tue, 05/15/2018 - 23:31
ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳಕರ, ಖಾನಾಪುರ ಕ್ಷೇತ್ರದ ಡಾ. ಅಂಜಲಿ ನಿಂಬಾಳ್ಕರ ಇದೇ ಮೊದಲ ಸಲ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

Pages

Back to Top